ಬೆಂಗಳೂರು-ದೆಹಲಿ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ

Header Banner

ಬೆಂಗಳೂರು-ದೆಹಲಿ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ

  Fri Jan 06, 2017 14:50        Kannada

ಬೆಂಗಳೂರು-ದೆಹಲಿ ಮಾರ್ಗದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷ ಸಮಸ್ಯೆಯಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ.
176 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸ್ಪೈಸ್ ಜೆಟ್ ಎಸ್ ಜಿ 136 ವಿಮಾನ ಇಂದು ಬೆಳಗ್ಗೆ 8.45ರ ಸುಮಾರಿಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿ ಹೈಡ್ರಾಲಿಕ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದ ಕಾರಣ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ತುರ್ತು ಭೂಸ್ಪರ್ಶ ವಿಮಾನದಲ್ಲಿದ್ದ ಯಾವುದೇ ಪ್ರಯಾಣಿಕರು ತೊಂದರೆಯಾಗಿಲ್ಲ ಎಂದು ತಿಳಿಸಿದ್ದಾರೆ.



   Bengaluru, Delhi, SpiceJet flight, Emergency landing, ಬೆಂಗಳೂರು, ದೆಹಲಿ, ಸ್ಪೈಸ್ ಜೆಟ್, ತುರ್ತು ಭೂಸ್ಪರ್ಶ