ಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ: ಜ. 10ರವರೆಗೆ ಆರೋಪಿಗಳು ಪೊಲೀಸ್ ವಶಕ್ಕೆ

Header Banner

ಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ: ಜ. 10ರವರೆಗೆ ಆರೋಪಿಗಳು ಪೊಲೀಸ್ ವಶಕ್ಕೆ

  Fri Jan 06, 2017 14:54        Kannada

ಹೊಸ ವರ್ಷಾಚರಣೆ ವೇಳೆ ಕಮ್ಮನಹಳ್ಳಿಯಲ್ಲಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಜನವರಿ 10ರವರೆಗೂ ಪೊಲೀಸ್ ವಶಕ್ಕೆ ನೀಡಲಾಗಿದೆ.
ನಿನ್ನೆ ಬಂಧಿತರಾಗಿದ್ದ ಆರೋಪಿಗಳಾದ ಲಿನೋ, ಅಯ್ಯಪ್ಪ, ರಾಜು ಮತ್ತು ಚಿನ್ನು ಎಂಬ ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಈ ವೇಳೆ ನ್ಯಾಯಾಧೀಶರು ಅವರನ್ನು 4 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ವಶಕ್ಕೆ ಪಡೆದಿರು ಪೊಲೀಸರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ.
ಪೊಲೀಸರಿಗೆ ಪ್ರಕರಣದ ಸಂಪೂರ್ಣ ಮಾಹಿತಿ ನೀಡಿದ ಸಂತ್ರಸ್ತ ಯುವತಿ
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಇಂದು ಸಂತ್ರಸ್ತ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಾಣಸವಾಡಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಯುವತಿ ಮನೆಗೆ ತೆರಳಿ ಹೇಳಿಕೆ ಪಡೆದಿದ್ದು, ಈ ವೇಳೆ ಯುವತಿ ಆ ಯುವಕರು ತನಗೆ ಪರಿಚಯವಿರಲ್ಲಿಲ್ಲ ಎಂದು ಹೇಳಿಕೊಂಡಿದ್ದಾಳೆ.   Bengaluru, Kammanahalli Molest Case, Karnataka Police, New Year Celebrations, ಬೆಂಗಳೂರು, ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ, ಕರ್ನಾಟಕ ಪೊಲೀಸ್, ಹೊಸ ವರ್ಷಾಚರಣೆ