ಇಂಗ್ಲೆಂಡ್ ವಿರುದ್ಧದ ಏಕದಿನ, ಟಿ20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ; ಕೊಹ್ಲಿ ನಾಯಕ

Header Banner

ಇಂಗ್ಲೆಂಡ್ ವಿರುದ್ಧದ ಏಕದಿನ, ಟಿ20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ; ಕೊಹ್ಲಿ ನಾಯಕ

  Sat Jan 07, 2017 10:02        Kannada, Sports

ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಟೀಂ ಇಂಡಿಯಾ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎನ್ಕೆ ಪ್ರಸಾದ್ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದರು. ಸೀಮಿತ ಓವರ್ ಗಳಿಗೆ ಎಂಎಸ್ ಧೋನಿ ನಿೃತ್ತಿ ಘೋಷಿಸಿದ ನಂತರ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಏಕದಿನ, ಟಿ20 ಕ್ರಿಕೆಟ್ ತಂಡದ ನಾಯಕತ್ವವನ್ನು ನೀಡಿದ್ದು ಕ್ರಿಕೆಟ್ ಮೂರು ಮಾದರಿಗಳಿಗೂ ವಿರಾಟ್ ಕೊಹ್ಲಿ ನಾಯಕತ್ವ ವಹಿಸಲಿದ್ದಾರೆ.

ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.

ಟೀಂ ಇಂಡಿಯಾ ಏಕದಿನ ತಂಡ

ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ಎಂಎಸ್ ಧೋನಿ(ವಿಕೆಟ್ ಕೀಪರ್), ಮನೀಶ್ ಪಾಂಡ್ಯೆ, ಕೇದಾರ್ ಜಾದವ್, ಯುವರಾಜ್ ಸಿಂಗ್, ಅಜಿಂಕ್ಯಾ ರಹಾನೆ, ಹಾರ್ದಿಕ್ ಪಾಂಡ್ಯಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಮಿತ್ ಮಿಶ್ರಾ, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್
ಟೀಂ ಇಂಡಿಯಾ ಟಿ20 ತಂಡ

ವಿರಾಟ್ ಕೊಹ್ಲಿ(ನಾಯಕ), ಎಂಎಸ್ ಧೋನಿ(ವಿಕೆಟ್ ಕೀಪರ್), ಕೆಎಲ್ ರಾಹುಲ್, ಮನ್ದೀಪ್, ಮನೀಶ್ ಪಾಂಡ್ಯೆ, ರಿಶಬ್, ಯುವರಾಜ್ ಸಿಂಗ್, ಸುರೇಶ್ ರೈನಾ, ಹಾರ್ದಿಕ್ ಪಾಂಡ್ಯಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಯುಜ್​​'ವೇಂದ್ರ ಚಹಾಲ್, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಆಶಿಶ್ ನೆಹ್ರಾ.


   Yuvraj Singh, England Team India, Virat Kohli, BCCI, ಯುವರಾಜ್ ಸಿಂಗ್, ಇಂಗ್ಲೆಂಡ್, ಟೀಂ ಇಂಡಿಯಾ, ವಿರಾಟ್ ಕೊಹ್ಲಿ, ಬಿಸಿಸಿಐ